ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುತ್ತೋಲೆ ಹೊರಡಿಸಿದೆ.
ಭಾರತದ ದಕ್ಷಿಣ ಭಾಗದಲ್ಲಿ ಸುಮಾರು 1200 ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಟಿಡಿಬಿ, ತಮ್ಮ ಆವರಣಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಆರೆಸ್ಸೆಸ್‌ಗೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿ ತನ್ನ ನಿಯಂತ್ರಣಕ್ಕೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೆ ಸುತ್ತೋಲೆ ಜಾರಿ ಮಾಡಿದೆ.ಈ ಸೂಚನೆಯನ್ನು ಎಲ್ಲ ದೇವಾಲಯಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಅದನ್ನು ಪಾಲನೆ ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿಡಿಬಿ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಕೆ ಅನಂತಗೋಪಾಲನ್, “ಆರೆಸ್ಸೆಸ್ ಶಾಖೆಗಳು ಅನೇಕ ದೇವಸ್ಥಾನಗಳಿಂದ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅಲ್ಲಿ ಕವಾಯತುಗಳನ್ನು ನಡೆಸುತ್ತಿವೆ. ನಾವು ಇಂತಹ ಸುತ್ತೋಲೆ ಹೊರಡಿಸಲು ಕಾರಣ ಇದು. ದೇವಸ್ಥಾನಗಳು ದೇವರ ಆರಾಧಕರಿಗಾಗಿ ಇರುವುದು. ಭಕ್ತರಿಗೆ ಇಂತಹ ಚಟುವಟಿಕೆಗಳಿಂದ ಯಾವುದೇ ಅನನುಕೂಲತೆ ಉಂಟಾಗಬಾರದು. ಇದು ಮಂಡಳಿಯ ನಿಲುವು” ಎಂದು ಹೇಳಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…