ಕೇರಳ ಸರ್ಕಾರ ತನ್ನ ಪರಿಷ್ಕೃತ ಬಜೆಟ್‌ನಲ್ಲಿ ರಬ್ಬರ್ ಬೆಳೆಗಾರರಿಗೆ ಮಹತ್ವದ ಘೋಷಣೆ ಮಾಡಿದ್ದು, ರಬ್ಬರ್‌ಗೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು (Support Price) ಪ್ರತಿ ಕೆ.ಜಿ.ಗೆ ₹200ರಿಂದ ₹250ಕ್ಕೆ ಏರಿಸಿದೆ. ಕೇರಳ ರಾಜ್ಯದ ಸುಮಾರು 5 ಲಕ್ಷಕ್ಕೂ ಅಧಿಕ ರಬ್ಬರ್ ಬೆಳೆಗಾರರಿಗೆ ಈ ಕ್ರಮದಿಂದ ನೇರ ಪ್ರಯೋಜನವಾಗಲಿದೆ.
ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ರಬ್ಬರ್ ಬೆಲೆ ದಾಖಲೆ ಮಟ್ಟ ತಲುಪಿದ್ದು, ಆರ್‌ಎಸ್‌ಎಸ್-4 (RSS-4) ದರ್ಜೆಯ ರಬ್ಬರ್ ಬೆಲೆ ಕೆಲ ಮಾರುಕಟ್ಟೆಗಳಲ್ಲಿ ₹260-₹280ರ ಗಡಿಯನ್ನು ದಾಟಿದೆ. ಹಾಗಿದ್ದರೂ ಮಾರುಕಟ್ಟೆ ಬೆಲೆಯಲ್ಲಿ ಏರಿಳಿತ ಸಂಭವಿಸಿದರೂ ರೈತರಿಗೆ ಕನಿಷ್ಠ ಆದಾಯದ ಭದ್ರತೆ ಒದಗಿಸಲು ಕೇರಳ ಸರ್ಕಾರ ಬೆಂಬಲ ಬೆಲೆಯನ್ನು ₹250ಕ್ಕೆ ಹೆಚ್ಚಿಸಿದೆ.
ಕೇರಳದ ಈಗಿನ ಯುಡಿಎಫ್ ಸರ್ಕಾರದ ಮೊದಲ ಬಜೆಟ್‌ನಲ್ಲಿ ಕೃಷಿ ಮತ್ತು ಸಾಂಪ್ರದಾಯಿಕ ಉದ್ಯಮಗಳಿಗೆ ವಿಶೇಷ ಒತ್ತು ನೀಡಲಾಗಿದ್ದು, ರಬ್ಬರ್ ಕ್ಷೇತ್ರಕ್ಕೆ ಹೆಚ್ಚುವರಿ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರಬ್ಬರ್ ಬೆಲೆ ಏರಿಕೆಯಿಂದ ಇತ್ತೀಚಿನ ತಿಂಗಳುಗಳಲ್ಲಿ ರಬ್ಬರ್ ವಲಯದಲ್ಲಿ ಉತ್ಸಾಹ ಮೂಡಿದ್ದು, ಹಲವು ಕಡೆ ನಿರ್ಲಕ್ಷ್ಯಗೊಂಡಿದ್ದ ತೋಟಗಳಲ್ಲಿ ಮತ್ತೆ ಟ್ಯಾಪಿಂಗ್ ಚಟುವಟಿಕೆಗಳು ಆರಂಭವಾಗಿವೆ ಎಂದು ವರದಿಗಳು ತಿಳಿಸಿವೆ.
Kerala has increased the support price of natural rubber from ₹200 to ₹250 per kg in its revised budget. The move is expected to benefit over five lakh rubber farmers in the state and provide income security despite market fluctuations. The decision comes at a time when rubber prices have touched historic highs in India.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…