ಕೇರಳ ಸರ್ಕಾರದ ಲಾಟರಿಯಲ್ಲಿ 25 ಕೋಟಿ ಓಣಂ ಬಂಪರ್ ಲಾಟರಿ ವಿಜೇತ ಅನುಪ್ ಈಗ ಲಾಟರಿಯೇ ಬೇಡವಿತ್ತು ಎಂದು ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಲಾಟರಿ ಗೆದ್ದ ಸುದ್ದಿ ಬಹಿರಂಗವಾದ ಬಳಕೆ, ದಿನಬೆಳಗಾಗುತ್ತಿದ್ದಂತೆಯೇ ಮನೆ ಮುಂದೆ ಸಾಲ ಕೇಳುವವರ ಸಂಖ್ಯೆ ಹೆಚ್ಚಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಟರಿ ಗೆದ್ದಾಗ ಬಹಳಷ್ಟು ಸಂತಸವಾಗಿತ್ತು. ಆದರೆ ಈಗ ಮನೆಯಿಂದ ಹೊರಗೆ ಕಾಲಿಡಲೂ ಆಗುತ್ತಿಲ್ಲ. ಮಗುವಿಗೆ ಆನಾರೋಗ್ಯ ಕಾಡಿದರೆ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಎಲ್ಲಿ ಹೋದರೂ ಜನ ಹುಡುಕಿಕೊಂಡು ಬರುತ್ತಾರೆ ಎನ್ನುತ್ತಾರೆ ಅನುಪ್.
ಬಹುಮಾನದ ಹಣ ಇನ್ನೂ ಕೈಸೇರಿಲ್ಲ ಎಂದು ಹೇಳಿದರೂ ಯಾರೂ ನಂಬುವುದಿಲ್ಲ. ತನ್ನ ಬಗ್ಗೆ ಮಾಧ್ಯಮಗಳು ಸಾಕಷ್ಟು ಸುದ್ದಿ ಹಬ್ಬಿಸಿರುವುದರಿಂದ ಎಲ್ಲಿಗೂ ಹೋಗಲೂ ಸಾಧ್ಯವಾಗುತ್ತಿಲ್ಲ. ಈಗ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…