ಕೆಜಿಎಫ್ ಚಾಪ್ಟರ್ 2 ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ.ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಈ ಚಿತ್ರ ರಾಜಮೌಳಿ ನಿರ್ದೇಶನದ RRR ಚಿತ್ರವನ್ನೂ ಮೀರಿಸಲಿದೆ ಎಂಬ ಮಾತುಗಳು ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದ್ದು, ಕನ್ನಡ ಚಿತ್ರವೊಂದು ಈಗ ವಿಶ್ವದಾದ್ಯಂತ ಸದ್ದು ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆ ತಂದಿದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…