ರಥಸಪ್ತಮಿಯ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಅರಣ್ಯ ಹಾಗೂ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಾಡಿನ ಬೆಂಕಿಯಿಂದ ಅರಣ್ಯ ಸಂಪತ್ತು ನಾಶವಾಗದಂತೆ ವಿಶೇಷ ಎಚ್ಚರ ವಹಿಸಬೇಕು ಎಂದು ನಿರ್ದೇಶಿಸಿದರು. ಕಾಡ್ಗಿಚ್ಚು ಪ್ರಕರಣಗಳನ್ನು ತಕ್ಷಣ ಗುರುತಿಸಿ ನಿಯಂತ್ರಣಕ್ಕೆ ತರಲು ಡ್ರೋನ್ ಸೌಲಭ್ಯ ಇರುವ ಪ್ರದೇಶಗಳಲ್ಲಿ ಕ್ಯಾಮೆರಾ ಮೂಲಕ ನಿಗಾವಹಿಸಬೇಕು ಎಂದು ಸಚಿವರು ತಿಳಿಸಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿ, ಸಿಬ್ಬಂದಿಯನ್ನು ಸದಾ ಎಚ್ಚರ ಸ್ಥಿತಿಯಲ್ಲಿ ಇರಿಸುವಂತೆ ಸೂಚಿಸಿದರು.
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರು–ಮೇವು ಒದಗಿಸಲು ಕ್ರಮ : ಬೇಸಿಗೆಯಲ್ಲಿ ಕಾಡಿನೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಉಂಟಾಗದಂತೆ ಅಧಿಕಾರಿಗಳು ಮುಂಗಡವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವ ಖಂಡ್ರೆ ಹೇಳಿದರು. ಜಲಗುಂಡಿಗಳಲ್ಲಿ ನೀರು ಕೊರತೆ ಆಗದಂತೆ ಸೌರ ಪಂಪುಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸುವ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಮಲೆ ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ವಿಶೇಷ ವ್ಯವಸ್ಥೆ: ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಮಾರ್ಗದಲ್ಲಿ ಸುರಕ್ಷತೆ ಹೆಚ್ಚಿಸಲು ಡ್ರೋನ್ ಕ್ಯಾಮೆರಾ ಅಳವಡಿಸಬೇಕೆಂದು ಸಚಿವರು ನಿರ್ದೇಶಿಸಿದರು. ಕಾಲುದಾರಿ ಹಾಗೂ ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಗೃಹ ರಕ್ಷಕರು ಮತ್ತು ಸ್ಥಳೀಯ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಿ, ಭಕ್ತರಿಗೆ ನೆರವಾಗುವಂತೆ ಸೂಚನೆ ನೀಡಿದರು.
ಕಟ್ಟೆಚ್ಚರ ವಹಿಸಲು ಸಚಿವರ ನಿರ್ದೇಶನ: ಕಾಡ್ಗಿಚ್ಚು ನಿಯಂತ್ರಣ ಹಾಗೂ ಅರಣ್ಯ ಸಂಪತ್ತು ಸಂರಕ್ಷಣೆಗೆ ಎಲ್ಲಾ ವಿಭಾಗಗಳು ಸಮನ್ವಯದಿಂದ ಕೆಲಸ ಮಾಡಬೇಕು. ಯಾವುದೇ ಅಸಾಧ್ಯ ಘಟನೆ ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…