Advertisement
MIRROR FOCUS

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ

Share

ರಥಸಪ್ತಮಿಯ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಅರಣ್ಯ ಹಾಗೂ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಾಡಿನ ಬೆಂಕಿಯಿಂದ ಅರಣ್ಯ ಸಂಪತ್ತು ನಾಶವಾಗದಂತೆ ವಿಶೇಷ ಎಚ್ಚರ ವಹಿಸಬೇಕು ಎಂದು ನಿರ್ದೇಶಿಸಿದರು. ಕಾಡ್ಗಿಚ್ಚು ಪ್ರಕರಣಗಳನ್ನು ತಕ್ಷಣ ಗುರುತಿಸಿ ನಿಯಂತ್ರಣಕ್ಕೆ ತರಲು ಡ್ರೋನ್ ಸೌಲಭ್ಯ ಇರುವ ಪ್ರದೇಶಗಳಲ್ಲಿ ಕ್ಯಾಮೆರಾ ಮೂಲಕ ನಿಗಾವಹಿಸಬೇಕು ಎಂದು ಸಚಿವರು ತಿಳಿಸಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿ, ಸಿಬ್ಬಂದಿಯನ್ನು ಸದಾ ಎಚ್ಚರ ಸ್ಥಿತಿಯಲ್ಲಿ ಇರಿಸುವಂತೆ ಸೂಚಿಸಿದರು.

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರು–ಮೇವು ಒದಗಿಸಲು ಕ್ರಮ :  ಬೇಸಿಗೆಯಲ್ಲಿ ಕಾಡಿನೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಉಂಟಾಗದಂತೆ ಅಧಿಕಾರಿಗಳು ಮುಂಗಡವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವ ಖಂಡ್ರೆ ಹೇಳಿದರು.  ಜಲಗುಂಡಿಗಳಲ್ಲಿ ನೀರು ಕೊರತೆ ಆಗದಂತೆ ಸೌರ ಪಂಪುಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸುವ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆ ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ವಿಶೇಷ ವ್ಯವಸ್ಥೆ:  ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಮಾರ್ಗದಲ್ಲಿ ಸುರಕ್ಷತೆ ಹೆಚ್ಚಿಸಲು ಡ್ರೋನ್ ಕ್ಯಾಮೆರಾ ಅಳವಡಿಸಬೇಕೆಂದು ಸಚಿವರು ನಿರ್ದೇಶಿಸಿದರು.  ಕಾಲುದಾರಿ ಹಾಗೂ ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಗೃಹ ರಕ್ಷಕರು ಮತ್ತು ಸ್ಥಳೀಯ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಿ, ಭಕ್ತರಿಗೆ ನೆರವಾಗುವಂತೆ ಸೂಚನೆ ನೀಡಿದರು.

ಕಟ್ಟೆಚ್ಚರ ವಹಿಸಲು ಸಚಿವರ ನಿರ್ದೇಶನ:  ಕಾಡ್ಗಿಚ್ಚು ನಿಯಂತ್ರಣ ಹಾಗೂ ಅರಣ್ಯ ಸಂಪತ್ತು ಸಂರಕ್ಷಣೆಗೆ ಎಲ್ಲಾ ವಿಭಾಗಗಳು ಸಮನ್ವಯದಿಂದ ಕೆಲಸ ಮಾಡಬೇಕು. ಯಾವುದೇ ಅಸಾಧ್ಯ ಘಟನೆ ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

31 minutes ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

42 minutes ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

51 minutes ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

57 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

16 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

21 hours ago