ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.
ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಖರೀದಿ ಮಾಡಿದ್ದರು. ಈ ದಾರವನ್ನು ಕುತ್ತಿಗೆಗೆ ಹಾಕಿಕೊಂಡಿದ್ದರಿಂದ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ ತಂದೆಗೆ ಏನಾಗಿದೆ ಎಂದು ತಿಳಿದಿರಲಿಲ್ಲ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ವರ್ಧನ್ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel