ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.
– ಅಂತರ್ಜಾಲ ಮಾಹಿತಿ
Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…