ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |

November 21, 2024
7:25 PM

ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ ವಿಸ್ತರಿಸುವ ಸಲುವಾಗಿ ನಮ್ಮ ನಂದಿನಿ ಹಾಲು ಮತ್ತು ಮೊಸರು ಈಗ ದೆಹಲಿಗೆ ಕಾಲಿಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ಕೆಎಂಎಫ್ ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ತನ್ನ ಮಾರಾಟ ಕೇಂದ್ರಗಳನ್ನು ಹೊಂದಿದೆ. ಕನ್ನಡದ ರೈತರ ಶ್ರಮದ ಸಂಸ್ಥೆಯೊಂದು ಕನ್ನಡತನವನ್ನು ಉಳಿಸಿಕೊಂಡು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ.  ರಾಜ್ಯದಲ್ಲಿ  ಪ್ರತಿದಿನ  92  ರಿಂದ 93 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು.   ರೈತರಿಂದ ಲೀಟರ್‌ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು,  ರಾಜ್ಯ ಸರ್ಕಾರ  ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ ಎಂದು ಹೇಳಿದರು.  ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆರಂಭಿಕ ಹಂತದಲ್ಲಿ 2.5  ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror