ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ ವಿಸ್ತರಿಸುವ ಸಲುವಾಗಿ ನಮ್ಮ ನಂದಿನಿ ಹಾಲು ಮತ್ತು ಮೊಸರು ಈಗ ದೆಹಲಿಗೆ ಕಾಲಿಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ಕೆಎಂಎಫ್ ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ತನ್ನ ಮಾರಾಟ ಕೇಂದ್ರಗಳನ್ನು ಹೊಂದಿದೆ. ಕನ್ನಡದ ರೈತರ ಶ್ರಮದ ಸಂಸ್ಥೆಯೊಂದು ಕನ್ನಡತನವನ್ನು ಉಳಿಸಿಕೊಂಡು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು. ರೈತರಿಂದ ಲೀಟರ್‌ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…