ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘25ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಇದೇ 28 ರಿಂದ ಏಪ್ರಿಲ್ 27ರ ವರೆಗೆ ಮೂರು ಮೈದಾನದಲ್ಲಿ ನಡೆಯಲಿದ್ದು, ಈಗಾಗಲೇ ದಾಖಲೆಯ 370 ತಂಡಗಳು ನೋಂದಣಿ ಮಾಡಿಕೊಂಡಿವೆ. ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಮಾತನಾಡಿ ಕಳೆದ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ 10 ತಂಡಗಳು ಹೆಚ್ಚುವರಿಯಾಗಿದ್ದು, 370 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಇದೇ 18 ಆಗಿದ್ದು, ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel