ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಂತೆ ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕರೆ ನೀಡಿದ್ದಾರೆ. ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಗಳು ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಸಮಿತಿಯ ಅಧಿಕೃತ ದೂರವಾಣಿ ಸಂಖ್ಯೆ 08272-228678 ಗೆ ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದ್ದಾರೆ. ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗೆ ಸಲಹೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel