ಕೊಡಗು ಜಿಲ್ಲೆಯಲ್ಲಿ ಸರ್ಕಾರದ ಕಂದಾಯ ಇಲಾಖೆ, ಸರ್ಕಾರದ ಹೆಸರಿನಲ್ಲಿರುವ ಪೈಸಾರಿ ಜಮೀನನ್ನು ಸಿ ಮತ್ತು ಡಿ ಜಮೀನೆಂದು ವರ್ಗೀಕರಿಸಿ ಅರಣ್ಯ ಇಲಾಖೆಗೆ ವರ್ಗಾವಣೆಯ ಸಂಬಂಧ ಸರ್ಕಾರ ಸಮಿತಿಯನ್ನು ರಚಿಸಿದೆ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವಿನ ಸಮಸ್ಯೆಗಳು, ವಸ್ತುಸ್ಥಿತಿ ವಿವರಗಳ ಕುರಿತು ಅಧ್ಯಯನ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವ ಸಲಹಾತ್ಮಕ ಅಂಶಗಳೊಂದಿಗೆ ವರದಿ ನೀಡಲು ಕೊಡಗು ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪ್ರಭಾಕರ ಕೆ.ಎಸ್. ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರಾಗಿ ಎ.ಎಸ್. ಭಾನುಪ್ರಕಾಶ್, ಪೂವಯ್ಯ ಜಯರಾಮ್, ಅವರನ್ನು ನೇಮಿಸಲಾಗಿದೆ. ಈ ಸಮಿತಿಯು ಮುಂದಿನ 6 ತಿಂಗಳೊಳಗಾಗಿ ಅನುಪಾಲನಾ ವರದಿ ನೀಡುವಂತೆ ಕಾಲಾವಧಿ ನಿಗದಿಪಡಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

