ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು, ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿದೆ. ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕೊಡಗು ಜಿಲ್ಲೆಯ ಅನೇಕ ಗ್ರಾಮಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ದೊರಕಿಲ್ಲ. ಆದಷ್ಟು ಶೀಘ್ರ ವಿದ್ಯುತ್ ಮರು ಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

