ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

July 31, 2026
7:23 AM
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ. ಕರಿಕೆಯಲ್ಲಿ ರಸ್ತೆ ತಡೆ ಹಾಗೂ ನಿಟ್ಟೂರಿನಲ್ಲಿ ಮನೆಗೋಡೆ ಕುಸಿದು ಓರ್ವ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಕಳೆದ ಎರಡು ತಿಂಗಳಿನಿಂದ ಮಳೆ ಕೊರತೆಯಿಂದ ಬಳಲುತ್ತಿದ್ದ ಕೊಡಗು ಜಿಲ್ಲೆಯಲ್ಲಿ ಇದೀಗ ಮಳೆ ಚೇತರಿಕೆ ಕಂಡಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ನಿರ್ಮಾಣವಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯೊಂದಿಗೆ ಮೈಕೊರೆಯುವ ಚಳಿ ಆವರಿಸಿದೆ. ದಟ್ಟ ಮಂಜು ಕವಿದಿರುವ ಹಿನ್ನೆಲೆಯಲ್ಲಿ ಹೊಂಡ-ಗುಂಡಿಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 78 ಮಿಲಿ ಮೀಟರ್ ಮಳೆ ದಾಖಲಾಗಿದ್ದು, ನದಿ ಪಾತ್ರದ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ.

ಜಿಲ್ಲೆಯ ಗಡಿ ಗ್ರಾಮವಾದ ಕರಿಕೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಪರಿಣಾಮ ದೊಡ್ಡ ಗಾತ್ರದ ಬಿದಿರು ಬುಡ ಸಮೇತ ರಸ್ತೆಗೆ ಉರುಳಿಬಿದ್ದಿದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೆರವು ಕಾರ್ಯ ನಡೆಸಿದ ಬಳಿಕ ಸಂಚಾರ ಪುನಃ ಆರಂಭವಾಯಿತು.

ಇದೇ ವೇಳೆ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಇಲಾಖೆ ಮುಂದಿನ ಕೆಲ ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವುದಾಗಿ ಸೂಚಿಸಿರುವ ಹಿನ್ನೆಲೆಯಲ್ಲಿ, ಗುಡ್ಡ ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Heavy rainfall has returned to Kodagu district after nearly two months of weak monsoon activity. Rain accompanied by strong winds has been reported across the district, bringing chilly weather, dense fog and a rise in the Cauvery river level. A bamboo clump fell on the road near Karike, disrupting traffic, while a house wall collapsed in Nittur village of Ponnampet taluk, injuring one person.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..
August 20, 2026
3:57 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ
August 20, 2026
3:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror