#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |

July 23, 2023
8:56 PM
ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಸೋಮವಾರ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಳೆದ 3-4 ದಿನಗಳ ಹಿಂದೆ ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆ ಕೊಡಗಿನಲ್ಲಿ ಈ ಬಾರಿ ಮಳೆ ಕೊರತೆ ಕಾಡುತ್ತಿದೆ ಎಂಬ ವರದಿಯೊಂದು ಪ್ರಕಟವಾಗಿತ್ತು. ಆದರೆ ಕಳೆದ 2-3 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜುಲೈ 24 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಎಡೆಬಿಡದೆ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ ಈ ಹಿನ್ನೆಲೆ ಸೋಮವಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ್ ರಜೆ  ಘೋಷಣೆ ಮಾಡಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಕ್ಷಣಕ್ಷಣಕ್ಕೂ ಹೆಚ್ಚಾಗಿದ್ದು ಸೋಮವಾರ ಬೆಳಗ್ಗೆ 8:30 ರವರೆಗೆ ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ ಯಾಗಿದ್ದು ನಾಪೋಕ್ಲು ಅಯ್ಯಗೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇತ್ತ ವಿರಾಜಪೇಟೆ ತಾಲೂಕಿನ ಭೇತ್ರಿ ಬಳಿ ಕಾವೇರಿ ನದಿಯ ನೀರು ಸೇತುವೆ ಮಟ್ಟಕ್ಕೆ ಬಂದಿದೆ.

ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದೆ. ಅಲ್ಲದೆ ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ. ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು ಸೋಮವಾರ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಒಳಹರಿವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ಇದೀಗ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಮತ್ತೊಂದೆಡೆ ಕಾವೇರಿ ನದಿಯ ಅಪಾಯ ಮಟ್ಟ ಏರಿಕೆ ಆಗುತ್ತಾ ಇರುವುದರಿಂದ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿ ಗ್ರಾಮದಲ್ಲಿ ಕಾವೇರಿ ನದಿಯು ಕೃಷಿ ಚಟುವಟಿಕೆ ಮಾಡುವ ಗದ್ದೆಗಳ ಮೇಲೆ ನೀರು ಹರಿಯುತ್ತಿದ್ದು ಇದೀಗ ರೈತಾಪಿ ವರ್ಗದ ಜನರು ಕಂಗಾಲಾಗಿದ್ದಾರೆ. ಅಲ್ಲದೇ ಪ್ರತಿ ವರ್ಷ ಮಳೆ ಬಂದರೆ ಯಾವುದೇ ರಕ್ಷಣೆ ಇಲ್ಲದೇ ಮಳೆಗಾಲ ಕಳೆಯುವವರೆಗೂ ಕಾಳಜಿ ಕೇಂದ್ರಗಳೇ ತಮಗೆ ಗತಿ ಎಂದು ಇಲ್ಲಿನ ಸ್ಥಳೀಯರು ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಅಕ್ಷರಶಃ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ
August 2, 2025
9:46 PM
by: The Rural Mirror ಸುದ್ದಿಜಾಲ
ಜನಪ್ರಿಯವಾಗುತ್ತಿರುವ ಕಾಫಿ ಬೆಳೆ | ಚಿಕ್ಕಮಗಳೂರಿನ ಕಾಫಿ ಮ್ಯೂಸಿಯಂ
August 2, 2025
9:24 PM
by: The Rural Mirror ಸುದ್ದಿಜಾಲ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 20 ನೇ ಕಂತಿನ ಹಣ ಬಿಡುಗಡೆ | ರಾಜ್ಯದ 43 ಲಕ್ಷಕ್ಕೂ ಹೆಚ್ಚು ರೈತರಿಗೆ ಹಣ ಸಂದಾಯ
August 2, 2025
8:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group