ಕಳೆದ 3-4 ದಿನಗಳ ಹಿಂದೆ ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆ ಕೊಡಗಿನಲ್ಲಿ ಈ ಬಾರಿ ಮಳೆ ಕೊರತೆ ಕಾಡುತ್ತಿದೆ ಎಂಬ ವರದಿಯೊಂದು ಪ್ರಕಟವಾಗಿತ್ತು. ಆದರೆ ಕಳೆದ 2-3 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜುಲೈ 24 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಡೆಬಿಡದೆ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ ಈ ಹಿನ್ನೆಲೆ ಸೋಮವಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ್ ರಜೆ ಘೋಷಣೆ ಮಾಡಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದೆ. ಅಲ್ಲದೆ ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ. ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು ಸೋಮವಾರ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾವೇರಿ ನದಿ ನೀರಿನ ಮಟ್ಟ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಒಳಹರಿವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ಇದೀಗ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಮತ್ತೊಂದೆಡೆ ಕಾವೇರಿ ನದಿಯ ಅಪಾಯ ಮಟ್ಟ ಏರಿಕೆ ಆಗುತ್ತಾ ಇರುವುದರಿಂದ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿ ಗ್ರಾಮದಲ್ಲಿ ಕಾವೇರಿ ನದಿಯು ಕೃಷಿ ಚಟುವಟಿಕೆ ಮಾಡುವ ಗದ್ದೆಗಳ ಮೇಲೆ ನೀರು ಹರಿಯುತ್ತಿದ್ದು ಇದೀಗ ರೈತಾಪಿ ವರ್ಗದ ಜನರು ಕಂಗಾಲಾಗಿದ್ದಾರೆ. ಅಲ್ಲದೇ ಪ್ರತಿ ವರ್ಷ ಮಳೆ ಬಂದರೆ ಯಾವುದೇ ರಕ್ಷಣೆ ಇಲ್ಲದೇ ಮಳೆಗಾಲ ಕಳೆಯುವವರೆಗೂ ಕಾಳಜಿ ಕೇಂದ್ರಗಳೇ ತಮಗೆ ಗತಿ ಎಂದು ಇಲ್ಲಿನ ಸ್ಥಳೀಯರು ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ.
ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಅಕ್ಷರಶಃ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…