Advertisement
ಸುದ್ದಿಗಳು

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

Share

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ  ಸಮಿತಿ ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್‌ಗಳು ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿ ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.ಮತ್ತೆ ಕೆರೆಗಳ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2520 ಕೆರೆಗಳಿದ್ದು, ಒತ್ತುವರಿ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇವೆ. ಜಿಲ್ಲಾ ವ್ಯಾಪ್ತಿಯಲ್ಲಿ ಕೆರೆಗಳ ತೆರವು ಮಾಡಿರುವ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕಿದ್ದು, ತೆರವು ಕಾರ್ಯಾಚರಣೆ ತ್ವರಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 hour ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago