ಸಂಸ್ಕರಿಸಿದ ಬೆಂಗಳೂರಿನ ತ್ಯಾಜ್ಯ ನೀರನ್ನು 446 ಕೋಟಿ ವೆಚ್ಚದಲ್ಲಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಮೂಲಕ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ, ಕೆ.ಸಿ.ವ್ಯಾಲಿ ಯೋಜನೆಯ ಮೊದಲನೇ ಹಂತ ಬಹಳ ಯಶಸ್ವಿಯಾಗಿದೆ. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಕೆರೆ ತುಂಬಿಸಿದ ವ್ತಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಈ ಹಿಂದೆ ಸುಮಾರು 1200 ರಿಂದ 1500 ಅಡಿಗೆ ಬೋರ್‌ವೆಲ್ ನೀರು ದೊರೆಯುತ್ತಿತ್ತು. ಈಗ ಸುಮಾರು 450 ಅಡಿಗೆ ನೀರು ದೊರೆಯುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಕೆ.ಸಿವ್ಯಾಲಿ ಯೋಜನೆ ಎರಡನೇ ಹಂತ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸುಮಾರು 272 ಕೆರೆಗಳಿಗೆ ನೀರು ತುಂಬಿಸುವಂತಾಗಲಿದೆ. ಕೋಲಾರ ಜಿಲ್ಲೆಯಲ್ಲಿ ಯಾವುದೇ ಶಾಶ್ವತ ನದಿಗಳು, ನೀರಾವರಿ ಯೋಜನೆ ಇಲ್ಲದ ಕಾರಣ ಈ ಯೋಜನೆಯಿಂದ ಬಹಳ ಅನುಕೂಲವಾಗಲಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೆ.ಸಿ.ವ್ಯಾಲಿ ಯೋಜನೆಗೆ ಎರಡು ಹಂತಗಳಲ್ಲಿ ಸುಮಾರು 395 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲಾಗುವುದು. ಜಿಲ್ಲೆಯ ಆಯಾ ತಾಲೂಕುಗಳಲ್ಲಿ ಶಾಸಕರು ಕೆರೆಗಳಿಗೆ ಭಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ

