ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

March 17, 2026
9:28 PM
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ. ಹೊಸ ದರ ₹37.40 ನಾಳೆಯಿಂದಲೇ ಜಾರಿಗೆ ಬರಲಿದೆ.

ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬದ ಪ್ರಯುಕ್ತ ಪ್ರತಿ ಲೀಟರ್ ಹಾಲಿಗೆ ₹2 ಹೆಚ್ಚಳ ಮಾಡಲು Kolar Milk Union (ಕೋಮುಲ್) ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕೋಮುಲ್ ಅಧ್ಯಕ್ಷ ಹಾಗೂ ಶಾಸಕ ಕೆ. ವೈ. ನಂಜೇಗೌಡ ತಿಳಿಸಿದ್ದಾರೆ.

ಕೋಲಾರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದರ ಏರಿಕೆ ನಾಳೆಯಿಂದಲೇ ಜಾರಿಗೆ ಬರಲಿದ್ದು, ಈ ಹಿಂದೆ ಪ್ರತಿ ಲೀಟರ್‌ಗೆ ₹35.40 ಇದ್ದ ದರವು ಇನ್ನು ಮುಂದೆ ₹37.40 ಆಗಲಿದೆ ಎಂದು ಹೇಳಿದರು.

ಹಾಲಿನ ಉತ್ಪಾದನೆ ಹೆಚ್ಚಿಸುವುದು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಈ ದರ ಏರಿಕೆ ಜಿಲ್ಲೆಯ ಸಾವಿರಾರು ಹಾಲು ಉತ್ಪಾದಕರಿಗೆ ಆರ್ಥಿಕವಾಗಿ ಸಹಾಯಕರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Kolar Milk Union (KOMUL) has decided to increase the milk procurement price by ₹2 per litre for farmers ahead of the Ugadi festival. The revised price of ₹37.40 per litre will come into effect from tomorrow to support production and quality.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror