Advertisement
MIRROR FOCUS

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

Share

ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯನ್ನು ತಡೆಯಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಅರಣ್ಯ ವಿಭಾಗ ವ್ಯಾಪ್ತಿಯಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದ್ದಾರೆ.

ನರಸಿಂಹರಾಜಪುರದಲ್ಲಿ ಮಾತನಾಡಿದ ಅವರು, ಈ ಯೋಜನೆಗಾಗಿ ₹12 ಕೋಟಿ 77 ಲಕ್ಷ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು. ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಚಲನೆ ಹಾಗೂ ಹಾವಳಿ ಹೆಚ್ಚಾಗಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾಡಿನಿಂದ ಗ್ರಾಮಗಳಿಗೆ ಕಾಡಾನೆಗಳು ನುಗ್ಗದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ವ್ಯವಸ್ಥೆ ಅಳವಡಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆಯಡಿ ನರಸಿಂಹರಾಜಪುರ, ಬಾಳೆಹೊನ್ನೂರು ಹಾಗೂ ಚಿಕ್ಕ ಅಗ್ರಹಾರ ಭಾಗಗಳಲ್ಲಿ ಬ್ಯಾರಿಕೇಡ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಈ ಕ್ರಮದಿಂದ ಕಾಡಾನೆಗಳು ಗ್ರಾಮ ಪ್ರದೇಶಗಳಿಗೆ ಪ್ರವೇಶಿಸುವುದನ್ನು ಕಡಿಮೆ ಮಾಡುವುದರ ಜೊತೆಗೆ ರೈತರ ಬೆಳೆ ನಷ್ಟ ಹಾಗೂ ಮಾನವ–ಆನೆ ಸಂಘರ್ಷವನ್ನು ನಿಯಂತ್ರಿಸಲು ಸಹಾಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka government has approved ₹12.77 crore for installing railway barricades in the Koppa forest division of Chikkamagaluru district to prevent elephants from entering human settlements. The barricades will be installed in Narasimharajapura, Balehonnur and Chikka Agrahara areas to reduce human-elephant conflict.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

5 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

6 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

19 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago