ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

January 10, 2023
9:23 PM

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.

ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್‌ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜ‌ನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್‌ ಶೆಟ್ಟಿ ಹೇಳಿದರು.

ಬಿಗ್‌ಬಾಸ್​ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror