ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ ಬಳಿಯ ಎ.ಬಿ.ಶೆಟ್ಟಿ ವೃತ್ತದಿಂದ ಕುತ್ತಾರುವಿನ ಕೊರಗಜ್ಜನ ಕಟ್ಟೆಯವರೆಗೆ ತೆರೆದ ವಾಹನದಲ್ಲಿ ರೂಪೇಶ್ ಶೆಟ್ಟಿ ಅವರನ್ನು ಮೆರವಣಿಗೆ ಮಾಡಲಾಯಿತು.
ಈ ವೇಳೆ ಕೈಯಲ್ಲಿ ಬಿಗ್ ಬಾಸ್ ಟ್ರೋಪಿ ಹಿಡಿದು ರೂಪೇಶ್ ಶೆಟ್ಟಿ ಸಂಭ್ರಮಿಸಿದರು. ರೂಪೇಶ್ ಶೆಟ್ಟಿ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟರೆ, ಅಭಿಮಾನಿಗಳು ತಮ್ಮ ವಿವಿಧ ವಾಹನಗಳಲ್ಲಿ ಸಾಗುತ್ತಾ ರೂಪೇಶ್ ಶೆಟ್ಟಿಗೆ ಸಾಥ್ ನೀಡಿದರು. ‘ ಬಿಗ್ ಬಾಸ್ ಟಾಪ್ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ ಬಂದರೆ ಮೊದಲಿಗೆ ಕುತ್ತಾರುವಿನ ಕೊರಗಜ್ಜನ ಕಟ್ಟೆಗೆ ಬರುವುದಾಗಿ ಹರಕೆ ಹೊತ್ತಿದ್ದೆ. ಇದೀಗ ಬಿಗ್‌ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದೇನೆ. ಬಿಗ್‌ಬಾಸ್ ಮನೆಯಲ್ಲಿಯೂ ಕೊರಗಜ್ಜನನ್ನೇ ಪ್ರಾರ್ಥಿಸುತ್ತಿದ್ದೆ’ ಎಂದು ರೂಪೇಶ್ ಶೆಟ್ಟಿ ಹೇಳಿದರು.
ಬಿಗ್ಬಾಸ್ನಿಂದ ದೊರೆತ ಹಣದಲ್ಲಿ ಅರ್ಧದಷ್ಟನ್ನು ಬಡವರಿಗೆ ಮನೆ ಕಟ್ಟಲು ವಿನಿಯೋಗಿಸುತ್ತೇನೆ ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…