ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಫಸಲ್ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಜೂ.30 ರ ವರೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಜೂ.24 ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕಾಲಾವಕಾಶ ರೈತರಿಗೆ ಕಷ್ಟವಾಗಲಿದೆ. ಹೀಗಾಗಿ ಸಮಯಾವಕಾಶ ವಿಸ್ತರಣೆ ಮಾಡಬೇಕು ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕಾ ಇಲಾಖಾ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಫಸಲ್ ಭೀಮಾ ಯೋಜನೆಯಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಸಮಸ್ಯೆಗಳ ಬಗ್ಗೆ ವಿಟ್ಲ-ಮುಡ್ನೂರು ಗ್ರಾಪಂ ಸದಸ್ಯ ಹಾಗೂ ವಿಟ್ಲ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲೇಶ್ವರ ಭಟ್ ಅವರು ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದಿದ್ದರು.