ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿ

April 22, 2023
10:35 PM

ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಡಿರುವ ಆರೋಪ ಭಾರೀ ಸಂಚಲನ ಮೂಡಿಸಿದೆ.

ಡಿಕೆ ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುತ್ತಿದ್ದಾರೆ. ಯಾರ್ಯಾರು ಪಕ್ಷಕ್ಕೆ ಸೇರ್ಪಡೆ ಆಗುವವರಿದ್ದಾರೋ ಅವರು ಆಯಾ ಜಿಲ್ಲೆಯಲ್ಲಿ ಸೇರ್ಪಡೆ ಆಗಲು ಸೂಚಿಸಿದ್ದೇನೆ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರಿದಂತೆ ಹಲವಾರು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಪ್ರಿಯಾಂಕ್​ ಖರ್ಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆ ಸೇರ್ಕೊಂಡು ಬಿಎಸ್ ವೈ ಮುಗಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಸಾಕ್ಷಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೈ ನಾಯಕ ನನ್ನ ಮೇಲಿನ ಆರೋಪದ ಬಗ್ಗೆ ಶೋಭಾ ಸಾಕ್ಷಿ ಕೊಡಲಿ, ಕೂಡಲೇ ನಾನು ಯಡಿಯೂರಪ್ಪ ಮುಗಿಸೋಕೆ ಅವರು ಹೊರಟಿರುವುದಕ್ಕೆ ಸಾಕ್ಷಿ ಕೊಡುತ್ತೇನೆ ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror