ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಡಿರುವ ಆರೋಪ ಭಾರೀ ಸಂಚಲನ ಮೂಡಿಸಿದೆ.
ಡಿಕೆ ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುತ್ತಿದ್ದಾರೆ. ಯಾರ್ಯಾರು ಪಕ್ಷಕ್ಕೆ ಸೇರ್ಪಡೆ ಆಗುವವರಿದ್ದಾರೋ ಅವರು ಆಯಾ ಜಿಲ್ಲೆಯಲ್ಲಿ ಸೇರ್ಪಡೆ ಆಗಲು ಸೂಚಿಸಿದ್ದೇನೆ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರಿದಂತೆ ಹಲವಾರು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆ ಸೇರ್ಕೊಂಡು ಬಿಎಸ್ ವೈ ಮುಗಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಸಾಕ್ಷಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೈ ನಾಯಕ ನನ್ನ ಮೇಲಿನ ಆರೋಪದ ಬಗ್ಗೆ ಶೋಭಾ ಸಾಕ್ಷಿ ಕೊಡಲಿ, ಕೂಡಲೇ ನಾನು ಯಡಿಯೂರಪ್ಪ ಮುಗಿಸೋಕೆ ಅವರು ಹೊರಟಿರುವುದಕ್ಕೆ ಸಾಕ್ಷಿ ಕೊಡುತ್ತೇನೆ ಎಂದಿದ್ದಾರೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…