ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್ ತೆರೆಯುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲು ಕನಿಷ್ಠ 4ರಿಂದ 5 ವರ್ಷ ಬೇಕಾಗಬಹುದು. ಸದ್ಯ ರಾಜ್ಯದಲ್ಲಿ 350 ಕೆಪಿಎಸ್ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸಹಯೋಗದಲ್ಲಿ ಇನ್ನೂ 500 ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದರು. ಕೆಪಿಎಸ್ ಶಾಲೆಗಳ ಮೂಲಕ ಪೂರ್ವ ಪ್ರಾಥಮಿಕ ಹಂತದಿಂದ ಹಿಡಿದು ಪದವಿ ಪೂರ್ವ ಶಿಕ್ಷಣದವರೆಗೆ ವಿದ್ಯಾರ್ಥಿಗಳಿಗೆ ಒಂದೇ ಸ್ಥಳದಲ್ಲಿ ಶಿಕ್ಷಣ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel