ಕೆಪಿಎಸ್ ಸಿ (KPSC) ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳನ್ನು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಪಿಎಸ್ ಸಿಯ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅ.19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ.
ಮೂರು ಹಂತಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ www.kpsc.com ಗೆ ಭೇಟಿ ನೀಡಬಹುದು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…