Advertisement
City mirror

ಕೃಷಿ ಮಸೂದೆಗಳ ತಿದ್ದುಪಡಿ | ರೈತರಿಗೆ ಅರಿವು ಮತ್ತು ಅವಲೋಕನ ಕಾರ್ಯಕ್ರಮ

Share
ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ತಿದ್ದುಪಡಿಗಳ ಬಗ್ಗೆ ರೈತ ಸಮುದಾಯಕ್ಕೆ ಮಾಹಿತಿ ನೀಡುವ ಸಲುವಾಗಿ ಅರಿವು ಮತ್ತು ಅವಲೋಕನ ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಕಾಲೇಜಿನ ಸಮಾಜಮುಖೀ ಧ್ಯೇಯಗಳಿಗೆ ಅನುಗುಣವಾಗಿ ಸೆ. 26 ಶನಿವಾರ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವು ನಡೆಯಲಿದ್ದು. ಕೃಷಿ ಅರ್ಥಶಾಸ್ತ್ರಜ್ಞ ಹಾಗೂ ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಇವರು ಮಸೂದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಉಪನ್ಯಾಸಕ ಮತ್ತು ಪರಿಸರ ತಜ್ಞ ಡಾ.ಶ್ರೀಶ ಕುಮಾರ್ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಸ್ತಾವನೆಯನ್ನು ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕೋವಿಡ್-19ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಕೃಷಿಕ ಬಂಧುಗಳ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಕೃಷಿ ಮಸೂದೆಯ ತಿದ್ದುಪಡಿಗಳ ಬಗ್ಗೆ ರೈತರಿಗೆ ಸಂದೇಹಗಳಿದ್ದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತರವನ್ನು ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-9743703473 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

2 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

11 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

13 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

19 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

20 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

21 hours ago