ಪ್ರಧಾನ ಮಂತ್ರಿ ಕಿಸಾನ್‍ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂಕಿಸಾನ್) ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೌಲಭ್ಯವನ್ನು ಮುಂದುವರಿಸಲು ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಅಥವಾ ಪೋರ್ಟಲ್‍ನ ಫಾರ್ಮರ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಲು ಇದೇ ಆ.31ರ ವರೆಗೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ಪಿ.ಎಂ. ಕಿಸಾನ್ ಯೋಜನೆ ಸೌಲಭ್ಯ ಮುಂದುವರಿಸಲು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ರೈತರು ಅಂತಿಮ ದಿನಾಂಕದೊಳಗೆ ಸಮೀಪದ ನಾಗರೀಕ ಸೇವಾ ಕೇಂದ್ರ (ಸಿಎಸ್‍ಸಿ), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಮತ್ತು ದೂರವಾಣಿ ಸಂಖ್ಯೆ ಜೋಡಣೆಯಾಗದಿದ್ದಲ್ಲಿ ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಬಯೋಮೆಟ್ರಿಕ್ ಆಧಾರಿತವಾಗಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…