ಕೃಷಿಯಂತ್ರ ಮೇಳ | ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಅಗತ್ಯ | ವಿಜ್ಞಾನಿ ಡಾ. ವಿನಾಯಕ ಹೆಗಡೆ ಅಭಿಮತ |

February 11, 2023
5:45 PM

ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ  ಹೇಳಿದರು.

Advertisement
Advertisement

ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ  ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

Advertisement

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.

Advertisement
ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror