ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ ಹೇಳಿದರು.
ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…