ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಸೂಚನೆ ನೀಡಿದರು. ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ತ್ವರಿತಗತಿಯಲ್ಲಿ ಆಗಬೇಕು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel