ಕೃಷ್ಣ ಜನ್ಮಭೂಮಿ ವಿವಾದ | ಪಿಐಎಲ್ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ |

January 5, 2024
1:55 PM

ಭಾರತ(India) ಸರ್ವ ಧರ್ಮ ಭೂಮಿ(Secular country). ಹಿಂದೂಗಳ(Hindu) ಕರ್ಮ ಭೂಮಿ. ಆದರೆ ಇಲ್ಲಿನ ಹಿಂದೂ ದೇವರುಗಳ(Hindu God) ಅಸ್ಥಿತ್ವದ ಬಗ್ಗೆ ಕಲಹ, ವೈಮನಸ್ಸು ನಡೆಯುತ್ತಲೇ ಇದೆ. ಸುಮಾರು 35 ವರ್ಷಗಳ ನಂತರ ಆಯೋಧ್ಯೆಯಲ್ಲಿ(Ayodya) ರಾಮನ ಮಂದಿರ(Rama Mandir) ನಿರ್ಮಾಣವಾಯ್ತು. ಇದೀಗ ಕೃಷ್ಣನ(Shri Krishna) ಸರದಿ. 

Advertisement
Advertisement

ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

Advertisement

ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಸ್ವಾಧೀನಪಡಿಸಿಕೊಂಡು ಶ್ರೀಕೃಷ್ಣನನ್ನು ಪೂಜಿಸಲು ಹಿಂದೂಗಳಿಗೆ ಹಸ್ತಾಂತರಿಸುವಂತೆ ಉತ್ತರ ಪ್ರದೇಶ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಅಲಹಾಬಾದ್ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ವಕೀಲ ಮಹೇಕ್ ಮಹೇಶ್ವರಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಕ್ಟೋಬರ್ 12, 2023 ರಂದು ತನ್ನ ವಿವರವಾದ ಆದೇಶದಲ್ಲಿ, ಮಥುರಾದ ಶಾಹಿ ಈದ್ಗಾ ಮಸೀದಿ ಸ್ಥಳವನ್ನು ಕೃಷ್ಣನ ಜನ್ಮಸ್ಥಳವೆಂದು ಗುರುತಿಸಲು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತ್ತು. ಮಹೇಶ್ವರಿ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ.

Advertisement

ಇಸ್ಲಾಮಿಕ್ ನ್ಯಾಯಶಾಸ್ತ್ರದ ಪ್ರಕಾರ, ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ವಾದಿಸಿದ್ದರು. ಮತ್ತೊಂದೆಡೆ, ಹಿಂದೂ ಕಾನೂನು ಮತ್ತು ನ್ಯಾಯಶಾಸ್ತ್ರದ ಪ್ರಕಾರ, ದೇವಾಲಯವು ಪಾಳುಬಿದ್ದಿದ್ದರೂ ಅದು ದೇವಾಲಯವಾಗಿದೆ ಎಂದು ಮಹೇಶ್ವರಿ ಅರ್ಜಿಯಲ್ಲಿ ವಾದಿಸಿದ್ದರು.

ಮಥುರಾದ ಕೃಷ್ಣ ಜನ್ಮ ಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಡಿ.14,2023ರಂದು ಅಲಹಾಬಾದ್ ಹೈಕೋರ್ಟ್‌ ಮಾನ್ಯ ಮಾಡಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ. ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ದೇವಸ್ಥಾನವನ್ನು ಕೆಡವಿ ಮೊಗಲ್ ದೊರೆ ಔರಂಗಜೇಬ್ ನಿರ್ದೇಶನದಂತೆ ಅಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.

Advertisement

The mosque committee has again approached the Supreme Court against the order of the Allahabad High court, which has allowed the appointment of a commissioner for the survey of Shahi Edga Masjid in Mathura regarding the Krishna Janmabhoomi dispute. On December 15, the Allahabad High Court had given permission for the survey of Shahi Eidga Masjid premises under the supervision of the court.

– ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror