ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಸ್ಫರ್ಧಾ ಕಾರ್ಯಕ್ರಮ |

September 12, 2023
5:54 PM
ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ  ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ  ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ  ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ  ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ , ಮಾಜಿ ವಿಧಾನ ಪರಿಷತ್ ಸದಸ್ಯರಾದ  ಅಣ್ಣಾ ವಿನಯಚಂದ್ರ, ಉದ್ಯಮಿಗಳಾದ ಪೊಸವಳಿಕೆ ಗೋಪಾಲಕೃಷ್ಣ ನಾಯಕ್, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷರಾದ ಹೇಮಂತ್ ಕುಮಾರ್ ಕಂದಡ್ಕ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇರ್ಪಳ ಇದರ ಅಧ್ಯಕ್ಷರಾದ  ದೇವದಾಸ್ ಪ್ರಭು, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಸುಳ್ಯ ಇದರ ಅಧ್ಯಕ್ಷರಾದ  ಅನಿತಾ ಕಾಯರ್ತೋಡಿ ಮುಂತಾದವರು ಭಾಗವಹಿಸಿದ್ದರು.

ಶಾಸಕರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಳ್ಯ ತಾಲೂಕಿನ ಸ್ವಸಮಾಜದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಮಾಜ ಬಾಂಧವರ ಆಸಕ್ತಿ ಹಾಗೂ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror