ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ , ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಣ್ಣಾ ವಿನಯಚಂದ್ರ, ಉದ್ಯಮಿಗಳಾದ ಪೊಸವಳಿಕೆ ಗೋಪಾಲಕೃಷ್ಣ ನಾಯಕ್, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷರಾದ ಹೇಮಂತ್ ಕುಮಾರ್ ಕಂದಡ್ಕ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇರ್ಪಳ ಇದರ ಅಧ್ಯಕ್ಷರಾದ ದೇವದಾಸ್ ಪ್ರಭು, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಸುಳ್ಯ ಇದರ ಅಧ್ಯಕ್ಷರಾದ ಅನಿತಾ ಕಾಯರ್ತೋಡಿ ಮುಂತಾದವರು ಭಾಗವಹಿಸಿದ್ದರು.
ಶಾಸಕರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಳ್ಯ ತಾಲೂಕಿನ ಸ್ವಸಮಾಜದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಮಾಜ ಬಾಂಧವರ ಆಸಕ್ತಿ ಹಾಗೂ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…