Advertisement
MIRROR FOCUS

#KrishnaJanmashtami | ಕೃಷ್ಣ ಜನ್ಮಾಷ್ಟಮಿಯ ದಿನ ವ್ರತದ ಆಚರಣೆ ಹೇಗೆ ? |

Share
ಕೃಷ್ಣ ಜನ್ಮಾಷ್ಟಮಿಯ ದಿನ ವ್ರತದ ಆಚರಣೆ ಹೇಗೆ ಮಾಡಬೇಕು ? ಏನೆಲ್ಲ ಕೃತಿ ಮಾಡಬೇಕು ? ಸನಾತನ ಸಂಸ್ಥೆಯ ಯಥಾವತ್ತಾದ ಲೇಖನ ಇಲ್ಲಿದೆ..

ಭಾರತದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ವರ್ಷ 18 ಆಗಸ್ಟ್ ಗೆ ಶ್ರೀ ಕೃಷ್ಣಜನ್ಮಾಷ್ಟಮಿ ಇದೆ. ಇದು ಹಿಂದೂ ಧರ್ಮದಲ್ಲಿನ ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಬನ್ನಿ ಇದರ ಆಚರಣೆಯ ಸವಿಸ್ತಾರ ಮಾಹಿತಿ ತಿಳಿಯೋಣ !

ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ : ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಬೃಂದಾವನದಲ್ಲಿ ಡೋಲೋತ್ಸವವಾಗುತ್ತದೆ. ಅದು ನೋಡಲು ಆನಂದದಾಯಕವಾಗಿರುತ್ತದೆ. ಇತರ ಕ್ಷೇತ್ರಗಳ ಅನೇಕ ಸ್ಥಳಗಳಲ್ಲಿ ಶ್ರೀಕೃಷ್ಣನ ದೇವಾಲಯದಲ್ಲಿ ಈ ಉತ್ಸವವನ್ನು ಆಚರಿಸಲಾಗುತ್ತದೆ. ಈ ದಿನ ಕೆಲವರು ತಮ್ಮ ಮನೆಯಲ್ಲಿಯೇ ಗೋಕುಲ-ಬೃಂದಾವನದಂತೆ ಪ್ರತಿರೂಪ ಮಾಡಿ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸುತ್ತಾರೆ. ವೈಷ್ಣವ ಪಂಥೀಯರು ಈ ದಿನವನ್ನು ಅತೀವ ಭಕ್ತಿಭಾವದಿಂದ ಆಚರಿಸುತ್ತಾರೆ. ಅನೇಕ ವೈಷ್ಣವ ದೇವಾಲಯಗಳಲ್ಲಿ ದೀಪಾರಾಧನೆ, ಶೋಭಾಯಾತ್ರೆ, ಕೃಷ್ಣಲೀಲೆ, ಭಾಗವತ ಪಠಣ, ಕೀರ್ತನೆ, ಭಜನೆ, ನೃತ್ಯ-ಗಾಯನ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮವು ಶ್ರಾವಣ ಕೃಷ್ಣ ಪಾಡ್ಯದಿಂದ ಶ್ರಾವಣ ಕೃಷ್ಣಾಷ್ಟಮಿಯವರೆಗೂ ನಡೆಯುತ್ತದೆ.

ಶ್ರೀಕೃಷ್ಣಜನ್ಮಾಷ್ಟಮಿ ವ್ರತ : ಈ ವ್ರತವನ್ನು ಅಷ್ಟಮಿಯಂದು ಮಾಡಲಾಗುತ್ತದೆ ಮತ್ತು ಎರಡನೆಯ ದಿನ ಅರ್ಥಾತ್ ಶ್ರಾವಣ ಕೃಷ್ಣ ನವಮಿಯಂದು ಪಾರಾಯಣ ಮಾಡಿ ವ್ರತವನ್ನು ಸಂಪನ್ನಗೊಳಿಸುತ್ತಾರೆ. ಈ ವ್ರತವು ಎಲ್ಲರೂ ಮಾಡುವಂತಹದ್ದಾಗಿದೆ. ಈ ವ್ರತವನ್ನು ಮಕ್ಕಳು, ಯುವಕರು, ವೃದ್ಧರು, ಸ್ತ್ರೀ- ಪುರುಷರು ಎಲ್ಲರೂ ಮಾಡಬಹುದು. ಪಾಪನಾಶ, ಸೌಖ್ಯವೃದ್ಧಿ, ಸಂತತಿ-ಸಂಪತ್ತಿ ಮತ್ತು ವೈಕುಂಠ ಪ್ರಾಪ್ತಿಯು ಈ ವ್ರತದ ಫಲವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ವ್ರತಕ್ಕೆ ಸಂಬಂಧಿಸಿದ ಉಪವಾಸ : ಈ ದಿನ ದಿನವಿಡೀ ಉಪವಾಸವನ್ನು ಮಾಡಲಾಗುತ್ತದೆ. ನಿರಾಹಾರ ಉಪವಾಸವು ಸಾಧ್ಯವಿಲ್ಲದಿದ್ದರೆ ಫಲಾಹಾರ ಮಾಡಬಹುದು. ಇದಕ್ಕೆ ಒಂದು ದಿನ ಮುಂಚೆ ಅರ್ಥಾತ್ ಶ್ರಾವಣ ಕೃಷ್ಣ ಸಪ್ತಮಿಯಂದು ಅಂಶಾತ್ಮಕ ಭೋಜನವನ್ನು ಮಾಡುತ್ತಾರೆ.

ಶ್ರೀಕೃಷ್ಣಜನ್ಮಾಷ್ಟಮಿಯ ಪೂಜಾವಿಧಿ : ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಭಗವಾನ ಶ್ರೀಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದ್ದನು. ಆದುದರಿಂದ ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಧ್ಯರಾತ್ರಿಯಲ್ಲಿ ಮಾಡಲಾಗುತ್ತದೆ. ಮಧ್ಯರಾತ್ರಿ ಸ್ನಾನವನ್ನು ಮಾಡಿ ಪೂಜೆಯನ್ನು ಆರಂಭಿಸಲಾಗುತ್ತದೆ. ‘ಭಗವಾನ ಶ್ರೀಕೃಷ್ಣನ ಜನ್ಮವಾಗಿದೆ’ ಎಂಬ ಧಾರಣೆಯಿಂದ ಪೂಜೆಯನ್ನು ಮಾಡಬೇಕು.

ಶ್ರೀಕೃಷ್ಣಜನ್ಮಾಷ್ಟಮಿಯಂದು ಇವುಗಳನ್ನು ಮಾಡಿ:
1.ತಮ್ಮ ಬಂಧು ಮಿತ್ರರಿಗೆ ಕಿರುಸಂದೇಶಗಳನ್ನು ಕಳುಹಿಸಿ ಅವರಿಗೆ ಶ್ರೀಕೃಷ್ಣನ ನಾಮಜಪವನ್ನು ಮಾಡಲು ಹೇಳಿರಿ!
2. ಶ್ರೀಕೃಷ್ಣನ ದೇವಸ್ಥಾನದಲ್ಲಿ ಸ್ವಚ್ಛತೆಯ ಸೇವೆಯನ್ನು ಮಾಡಿ!
3. ಶ್ರೀಕೃಷ್ಣನ ಅವಮಾನವಾಗುತ್ತಿರುವುದು ಕಂಡು ಬಂದಲ್ಲಿ ಅದನ್ನು ತಡೆಗಟ್ಟಿರಿ!
4. ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ‘ಓಂ ನಮೋ ಭಗವತೇ ವಾಸುದೇವಾಯ’ ನಾಮಜಪವನ್ನು ಮಾಡಿ.

ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣತತ್ತ್ವವು ಇತರ ದಿನಗಳ ತುಲನೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಅಂದರೆ 1 ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದುದರಿಂದ ಶ್ರೀಕೃಷ್ಣನ ಚೈತನ್ಯದಾಯಕ ತತ್ತ್ವಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಈ ಲಹರಿಗಳಿಂದ ಜೀವಕ್ಕೆ ವ್ಯಾವಹಾರಿಕ ಮತ್ತು ಆಧ್ಯಾತ್ಮಿಕ ಈ ಎರಡೂ ಸ್ತರಗಳಲ್ಲಿ ಲಾಭವಾಗುತ್ತದೆ. ಈ ಕಾರ್ಯನಿರತ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ.

ಕೃಷ್ಣಗಾಯತ್ರಿ

ದೇವಕೀನಂದನಾಯ ವಿದ್ಮಹೇ | ವಾಸುದೇವಾಯ ಧೀಮಹಿ | ತನ್ನೋ ಕೃಷ್ಣಃ ಪ್ರಚೋದಯಾತ್ ||

ಅರ್ಥ : ನಾವು ದೇವಕೀಪುತ್ರ ಕೃಷ್ಣನನ್ನು ಅರಿತಿದ್ದೇವೆ. ವಾಸುದೇವನ ಧ್ಯಾನ ಮಾಡುತ್ತೇವೆ. ಆ ಕೃಷ್ಣನು ನಮ್ಮ ಬುದ್ಧಿಗೆ ಸತ್ ಪ್ರೇರಣೆ ಕೊಡಲಿ.

ಆಧಾರ :
ಸನಾತನ ಸಂಸ್ಥೆ |  ಸಂಗ್ರಹ :  ವಿನೋದ್ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

7 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

9 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

10 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago