ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಡ್ಯಾಂನ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ. ಕಾವೇರಿ ನದಿ ಪಾತ್ರದ ಜನರು ತಮ್ಮ ಸುರಕ್ಷತೆ ಜೊತೆಗೆ ತಮ್ಮ ಬೆಲೆ ಬಾಳುವ ವಸ್ತುಗಳನ್ನು ಸಂರಕ್ಷಿಸಿಕೊಳ್ಳುವಂತೆ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದೆ. ಕೆ.ಆರ್.ಎಸ್. ಡ್ಯಾಂನ ಇಂದಿನ ನೀರಿನ ಮಟ್ಟ 118.60 ಇದ್ದು, ಭರ್ತಿಗೆ ಕೇವಲ ಆರು ಅಡಿ ಮಾತ್ರ ಬಾಕಿ ಇದೆ.124.80 ಅಡಿಯಷ್ಟು ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಡ್ಯಾಂಗೆ 18.387 ಒಳ ಹರಿವು ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel