ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |

July 13, 2024
12:18 PM

ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಕೆಆರ್‌ಎಸ್‌ ಡ್ಯಾಂ (KRS Dam) ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಈಗ 3,406 ಕ್ಯೂಸೆಕ್‌ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 104.60 ಅಡಿ ನೀರು ಸಂಗ್ರಹವಾಗಿದೆ. ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶವನ್ನು ಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿದೆ. ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ನೀರು ಮಾತ್ರ ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರಿನ ಅಗತ್ಯವಿದೆ. ಹೀಗಾಗಿ ಜುಲೈ ವರೆಗೂ ನೀರು (Cauvery Water) ಕೊಡಲು ಸಾಧ್ಯವಿಲ್ಲ ಅಂತ ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ನಿನ್ನೆ ಆದೇಶದ ವಿರುದ್ಧ ನಾವು ಅಪೀಲ್ ಹಾಕ್ತಿದ್ದೇವೆ ಎಂದು ಖಡಕ್ಕಾಗಿ ಹೇಳಿದ್ದಾರೆ.

Advertisement
Advertisement
Advertisement
Advertisement
ಜುಲೈ 31ರ ವರೆಗೆ ತಮಿಳುನಾಡಿಗೆ (Tamil Nadu) ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ತುರ್ತು ಸಭೆ ನಡೆಸಿದರು. ಜಲ ಸಂಪನ್ಮೂಲ ಇಲಾಖೆಯೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಕಣಿವೆ ಭಾಗದ ಸಚಿವರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು.

ಕಾವೇರಿ ನೀರು ನೀರಾವರಿ ನಿಯಂತ್ರಣಾ ಸಮಿತಿ ನಿತ್ಯ 1 ಟಿಎಂಸಿ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ಆದ್ರೆ ಇಂದಿನ ಸಭೆಯಲ್ಲಿ ನಾವು ಪರಿಸ್ಥಿತಿ ವಿವರಿಸಿದ್ದೇವೆ. ಆದರೂ ಸಹ, ಮಳೆಯಿದ್ದರೂ ಈವರೆಗೆಗೆ 28% ನೀರು ಕೊರತೆ ನಮಗೆ ಇದೆ.ಇದನ್ನ ನಾವು ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ನಿಲುವನ್ನೂ ಹೇಳಿದ್ದೇವೆ. ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಜುಲೈ ಕೊನೆವರೆಗೂ ಪರಿಸ್ಥಿತಿ ನೋಡಿಕೊಳ್ಳಬೇಕು ಅಂತ ಮನವಿ ಮಾಡಿದ್ದೇವೆ. ಇದರ ಹೊರತಾಗಿಯೂ ಸಿಡಬ್ಲ್ಯೂಆರ್‌ಸಿ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಹೇಳಿದೆ ಎಂದು ವಿವರಿಸಿದ್ದಾರೆ. ಕಳೆದ ಮೂರು ದಿನಗಳಿಂದ ಕಬಿನಿ ಜಲಾಶಯದಿಂದ ನೀರು ಬಿಡುತ್ತಿದ್ದೇವೆ. ಕಬಿನಿಗೆ ಎಷ್ಟು ಒಳಹರಿವು ಇದೆಯೋ, ಅಷ್ಟೇ ಹೊರಹರಿವು ಸಹ ಬಿಡ್ತಿದ್ದೇವೆ. ಕಬಿನಿ ಜಲಾಶಯ 96% ತುಂಬಿರುವ ಕಾರಣ ನೀರು ಹರಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

Advertisement

ಮೇಲ್ಮನವಿ ಸಲ್ಲಿಸಲು ನಿರ್ಧಾರ: ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧವಾಗಿ ಅಪೀಲು ಹಾಕಲು ನಿರ್ಧಾರ ಮಾಡಿದ್ದೇವೆ. ನೀರು ಬಿಡಲು ಆಗೊಲ್ಲ ಅಂತ ಅಪೀಲ್ ಹಾಕಲು ನಿರ್ಧಾರ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಮೇಲ್ಮನವಿ ಹಾಕಲು ನಿರ್ಧಾರ ಮಾಡಿದ್ದೇವೆ.

ಜು.14ರಂದು ಸರ್ವಪಕ್ಷ ಸಭೆ: ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಹಾಗಾಗಿ ಜುಲೈ 14ರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆಯಲು ನಿರ್ಧಾರ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯ ನೇತೃತ್ವ ವಹಿಸಲಿದ್ದಾರೆ. ನಾನೂ ಸಭೆಯಲ್ಲಿ ಭಾಗವಹಿಸುತ್ತೇನೆ. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror