ಕಳೆದ 5 ವರ್ಷಗಳಲ್ಲಿ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು : ಮಳೆ ಪ್ರಮಾಣದಲ್ಲಿ ಇಳಿಕೆ

May 24, 2023
12:48 PM

ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ  ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.

ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.

ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್‌ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.

ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror