ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.
ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್‌ಎಸ್ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.
ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.
ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…