100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

July 25, 2023
1:43 PM
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ.

ಮುಂಗಾರು ಮಳೆ ಅಬ್ಬರ ಜೋರಾಗುತ್ತಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.

Advertisement
ಕಾವೇರಿ ಜಲಾನಯನ #cauverybasin ಪ್ರದೇಶದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೀಗಾಗಿ 48 ಗಂಟೆಯ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂಗೆ 5 TMC ನೀರು ಹರಿದುಬಂದಿದೆ. ಕೇವಲ 2 ದಿನಗಳ ಅವಧಿಯಲ್ಲಿ 8 ಅಡಿ ಡ್ಯಾಂ ನೀರು ಭರ್ತಿಯಾಗಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.

ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ: ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು
May 8, 2025
7:21 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group