ಮುಂಗಾರು ಮಳೆ ಅಬ್ಬರ ಜೋರಾಗುತ್ತಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.
ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.
ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ: ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…