30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

December 30, 2024
6:46 AM

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.

49.457  ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ.  ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್‌ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್  ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror