ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸುಳ್ಯ ಘಟಕ ಅಸ್ತಿತ್ವಕ್ಕೆ | ರಾಜ್ಯದಲ್ಲಿ 119 ಕಡೆ ಅಭ್ಯರ್ಥಿ ಘೋಷಣೆ – ಸೋಮಸುಂದರ ಕೆ.ಎಸ್ |

April 7, 2023
8:39 PM
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ತತ್ವ ಸಿದ್ಧಾಂತ ವನ್ನು ಒಪ್ಪುವ ಸೂಕ್ತ ಅಭ್ಯರ್ಥಿ ಸಿಕ್ಕಿದಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಸೋಮಸುಂದರ ಕೆ.ಎಸ್. ತಿಳಿಸಿದ್ದಾರೆ. 
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮೂಡಬಿದ್ರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಸುಳ್ಯ ಸೇರಿ ಉಳಿದ 5 ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತಿದೆ. ಸ್ವಚ್ಚ, ಜನಪರ ಕಾಳಜಿಯುಳ್ಳ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಭ್ಯರ್ಥಿ ಸಿಕ್ಕಿದಲ್ಲಿ ಕಣಕ್ಕಿಳಿಸಲಾಗುವುದು ಎಂದು ಅವರು ಹೇಳಿದರು. ಪಕ್ಷದ ವತಿಯಿಂದ ನಡೆಸಿದ ಚೈತನ್ಯ ಯಾತ್ರೆಯಿಂದ ಪಕ್ಷ ಸಂಘಟನೆಗೆ ಹೆಚ್ಚು ಸಹಾಯಕವಾಗಿದೆ.‌ ಸಾವಿರಾರು ಮಂದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ನೂತನ ಪದಾಧಿಕಾರಿಗಳನ್ನು ಸೋಮಸುಂದರ್ ಅವರು ಘೋಷಿಸಿದರು. ಸುಳ್ಯ ಕ್ಷೇತ್ರದ ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ, ಪ್ರಧಾ‌ನ ಕಾರ್ಯದರ್ಶಿಯಾಗಿ ಜೀವನ್ ನಾರ್ಕೋಡು, ಕಾರ್ಯದರ್ಶಿಯಾಗಿ ಇಕ್ಬಾಲ್ ಸುಣ್ಣಮೂಲೆ ಆಯ್ಕೆಯಾಗಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ಅವಿನಾಶ್ ಕಾರಿಂಜ, ಪ್ರಧಾ‌ನ ಕಾರ್ಯದರ್ಶಿ ಜೀವನ್ ನಾರ್ಕೋಡು, ಸದಸ್ಯ‌ ಐವನ್ ಪೆರಾವೊ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror