ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

June 22, 2026
9:01 PM
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಇಬ್ಬರು ಹೊಸ ಸದಸ್ಯರನ್ನು ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆ. ಟಿ. ಬಸವರಾಜ ನಾಯಕ್ ಹಾಗೂ ಯೋಗೇಶ್ವರ ಎಚ್.ಆರ್. ಅವರು ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲಿದ್ದಾರೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (KSNUAHS) ಆಡಳಿತ ಮಂಡಳಿಗೆ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಇಬ್ಬರು ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಕಾರ್ಯಾಲಯವು ಜೂನ್ 22 ರಂದು ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ನಾಮನಿರ್ದೇಶನಗೊಂಡ ಸದಸ್ಯರ ಅವಧಿ ಜೂನ್ 25, 2026ಕ್ಕೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊಸ ಸದಸ್ಯರನ್ನು ನೇಮಕ ಮಾಡಲಾಗಿದೆ. ಕೃಷಿ ಕ್ಷೇತ್ರದ ಖ್ಯಾತ ಶಿಕ್ಷಣ ತಜ್ಞರಾಗಿ ನಿವೃತ್ತ ಸಹ ಪ್ರಾಧ್ಯಾಪಕ ಹಾಗೂ ಹಿರಿಯ ಕೃಷಿ ಕ್ಷೇತ್ರ ಮೇಲ್ವಿಚಾರಕರಾದ ಟಿ. ಬಸವರಾಜ ನಾಯಕ್ ಹಾಗೂ  ಕೃಷಿ ಕೈಗಾರಿಕೋದ್ಯಮಿ ಅಥವಾ ಮಹಿಳಾ ಸಮಾಜಸೇವಕರ ಕೋಟಾದಡಿ ಯೋಗೇಶ್ವರ ಎಚ್. ಆರ್. ಅವರನ್ನು ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ. ಸದಸ್ಯರ ಅವಧಿಯು 2026ರ ಜೂನ್ 27ರಿಂದ ಮೂರು ವರ್ಷಗಳ ಕಾಲ ಇರಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Governor and Chancellor of Universities Thaawarchand Gehlot has nominated T. Basavaraj Naik and Yogeswara H.R. to the Board of Management of Keladi Shivappa Nayaka University of Agricultural and Horticultural Sciences, Shivamogga. Their three-year term will commence from June 27, 2026.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror