Advertisement
Political mirror

ಕೇರಳ ಸುದ್ದಿ | ಕೆಎಸ್‌ಆರ್‌ಟಿಸಿ ವೇತನ ಸಮಸ್ಯೆ | ಪಿಣರಾಯಿ ಭೇಟಿ ಮಾಡಿದ ಆಂಟನಿ ರಾಜು

Share

ಕೆಎಸ್‌ಆರ್‌ಟಿಸಿಯಲ್ಲಿನ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಾರಿಗೆ ಸಚಿವ ಆಂಟನಿ ರಾಜು ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ವೇತನ ವಿತರಣೆಯಲ್ಲಿನ ವಿಳಂಬದ ವಿರುದ್ಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿತ್ತು. ಪ್ರತಿ ತಿಂಗಳ ಐದನೇ ತಾರೀಕಿನೊಳಗೆ ವೇತನ ವಿತರಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸುವಂತೆ ಸಚಿವರು ಕೋರಿದರು.

ಮೇ 10ರ ಗಡುವು ಮುಗಿದರೂ ವೇತನ ಪಾವತಿಸಲು ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿಗೆ ಸಾಧ್ಯವಾಗಿಲ್ಲ. ಆಡಳಿತಾರೂಢ ಎಲ್‌ಡಿಎಫ್‌ಗೆ ಸೇರಿದ ಕಾರ್ಮಿಕ ಸಂಘಟನೆಗಳು ಮುಷ್ಕರದಿಂದ ದೂರ ಉಳಿಯಲು ನಿರ್ಧರಿಸಿದ್ದರೆ, ಸಾರಿಗೆ ಪ್ರಜಾಸತ್ತಾತ್ಮಕ ಫೆಡರೇಷನ್ (ಐಎನ್‌ಟಿಯುಸಿ) ಘಟಕಗಳಾದ್ಯಂತ ನಿರಂತರ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಮತ್ತೊಂದು ಮಾನ್ಯತೆ ಪಡೆದ ಕಾರ್ಮಿಕ ಸಂಘಟನೆಯಾದ ಕೇರಳ ರಾಜ್ಯ ಸಾರಿಗೆ ನೌಕರರ ಸಂಘ (ಬಿಎಂಎಸ್) ಮುಂದಿನ ದಿನಗಳಲ್ಲಿ ವ್ಯಾಪಕ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಿದೆ. ಶುಕ್ರವಾರದ ಮುಷ್ಕರದಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸದಂತೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.ನೌಕರರಿಗೆ ವೇತನ ನೀಡುವ ಜವಾಬ್ದಾರಿ ಆಡಳಿತ ಮಂಡಳಿಯ ಮೇಲಿದೆ ಎಂದು ರಾಜು ನಿಲುವು ತಳೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago