ಬಸ್ಸಿನಲ್ಲಿ ರೈಟ್‌ ಪೋಯಿ ಎಂದ ವಿದ್ಯಾರ್ಥಿ… ! | ನಿರ್ವಾಹಕನ ಬಿಟ್ಟು ಬಸ್ಸು ಚಲಾಯಿಸಿದ ಚಾಲಕ…! |

November 3, 2022
8:44 PM

ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್‌ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್‌ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್‌ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್‌ ಚಲಾಯಿಸಿದ್ದಾರೆ.

ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್‌.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್‌ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್‌ .ಟಿ.ಸಿ. ಬಸ್‌ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್‌ ನ್ನು ಸೇರಿಕೊಂಡಿದ್ದಾರೆ.

ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್‌ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror