2022-23ನೇ ಸಾಲಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಜಾರಿಯಿರುವ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ, ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ.ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಪಾಸುಗಳ ವಿತರಣೆ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ಈ ಯೋಜನೆಯಡಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹಾ ಅವರು ಇಚ್ಛಿಸುವ ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ ಗರಿಷ್ಟ 45 ಕಿ.ಮೀ ನಷ್ಟು ಯಾವುದೇ ಮಾರ್ಗದಲ್ಲಿಯಾದರೂ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ. ಈ ಪಾಸುಗಳನ್ನು ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕ ಮಂಡಳಿಯು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ವಿತರಿಸಲಾಗುತ್ತದೆ.
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅವರ ಹತ್ತಿರವಿರುವ ಗ್ರಾಮ-1, ಕರ್ನಾಟಕ-1 ಕೇಂದ್ರಗಳ ಮುಖಾಂತರ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ ಪಾಸುಗಳನ್ನು ಪಡೆಯಬಹುದು. ಗ್ರಾಮ-1, ಕರ್ನಾಟಕ-1 ಕೇಂದ್ರಗಳಿಗೆ ಭೇಟಿ ನೀಡುವ ಕಾರ್ಮಿಕರು ತಮ್ಮ ನೋಂದಣಿಯಾದ ಕಾರ್ಮಿಕರ ನೋಂದಾಯಿತ ಫಲಾನುಭವಿಯ ಗುರುತಿನ ಹಾಗೂ ಆಧಾರಕಾರ್ಡ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯ ಮೊಬೈಲ್‍ನ್ನು ತೆಗೆದುಕೊಂಡು ಹೋಗಬೇಕು. ಗ್ರಾಮ- ಕೇಂದ್ರದಲ್ಲಿ ಫಲಾನುಭವಿಯ ಗುರುತಿನ ಚೀಟಿಯನ್ನು ದಾಖಲಿಸುತ್ತಿದ್ದಂತೆ ಅದರಲ್ಲಿ ನೋಂದಣಿಯಾದ ಮೊಬೈಲ್‍ಗೆ ಒಟಿಪಿ ಬರಲಿದ್ದು, ಆ ಒಟಿಪಿಯನ್ನು ದಾಖಲಿಸಿದರೆ ಅರ್ಜಿ ಸಲ್ಲಿಸಿದಂತಾಗುತ್ತದೆ. ಉಚಿತ ಬಸ್ ಪಾಸು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರು ಪಾಸಿನೊಂದಿಗೆ ಕರಾರಸಾ ನಿಗಮ ಅಥವಾ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ನಗರ, ಸಾಮಾನ್ಯ ಅಥವಾ ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಲು ಅವಕಾಶವಿರುತ್ತದೆ. ಪಾಸಿನ ಮಾನ್ಯತಾ ಅವಧಿ ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಚಾಲ್ತಿ ಅವಧಿ ಮುಕ್ತಾಯವಾದ ನಂತರ ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ ಮೂಲಕ ಪಾಸು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…