ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …